ಉರುಳಿಬಿದ್ದ ಮರ ಸೃಷ್ಟಿಸಿರುವ ಅನಾಹುತ

ನಗರದಲ್ಲಿರುವ ಮರಗಳ ಸಮೀಕ್ಷೆ ನಡೆಸಿ ಅವುಗಳ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳುವುದು ಬಿಬಿಎಂಪಿಯ ಕೆಲಸ. ಅದರೆ, ಪ್ರತಿ ಮಳೆಗಾಲದಲ್ಲಿ ಮರಗಳು ಉರುಳಿ ಅನಾಹುತಗಳು ಸಂಭವಿಸುತ್ತಿದ್ದರೂ ಪಾಲಿಕೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ಪ್ರದರ್ಶಿಸುತ್ತಿರೋದು ನಗರ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.