ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ನವಿರಾದ ಪ್ರೇಮಕತೆ ಇರುವುದು ಟ್ರೈಲರ್ನಲ್ಲಿ ತಿಳಿದು ಬರುತ್ತಿದೆ. ಇಂದು (ಆಗಸ್ಟ್ 17) ನಡೆದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ರಕ್ಷಿತ್ ಶೆಟ್ಟಿ, ಪ್ರೀತಿ ಬಗ್ಗೆ ಮಾತನಾಡಿದರು. ಜೊತೆಗೆ ತಾವೇಕೆ ಸ್ಯಾಡ್ ಲವ್ ಸ್ಟೋರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೀನಿ ಎಂಬ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಜಾಣತನದಿಂದ ಉತ್ತರಿಸಿದರು.