‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸಿರುವ ಗಣೇಶ್ ಹಾಗೂ ‘ಭೀಮ’ ಸಿನಿಮಾವನ್ನು ನಿರ್ದೇಶಿಸಿ ನಟಿಸಿರುವ ದುನಿಯಾ ವಿಜಯ್ ಅವರು ನೆನಪಿನ ಪುಟ ತೆರೆದಿದ್ದಾರೆ. ಕಳೆದ 24 ವರ್ಷಗಳ ಸ್ನೇಹದಲ್ಲಿ ಪರಸ್ಪರ ಜಗಳ ಮಾಡಿಕೊಂಡಿಲ್ಲ ಎಂದು ಗಣೇಶ್-ವಿಜಿ ಹೇಳಿದ್ದಾರೆ. ಆರಂಭದಲ್ಲಿ ಬಹಳ ಕಷ್ಟದ ದಿನಗಳನ್ನು ಕಂಡಿದ್ದ ಅವರು ಅದನ್ನೆಲ್ಲ ನೆನಪು ಮಾಡಿಕೊಂಡಿದ್ದಾರೆ.