ಐಪಿಎಲ್ ವೃತ್ತಿಜೀವನದ ಚೊಚ್ಚಲ ಶತಕ ಸಿಡಿಸಿದ ಇಶಾನ್ ಕಿಶನ್

ಇಶಾನ್ 19 ನೇ ಓವರ್‌ನಲ್ಲಿ 2 ರನ್‌ಗಳನ್ನು ತೆಗೆದುಕೊಳ್ಳುವ ಮೂಲಕ ಐಪಿಎಲ್ 2025 ರ ಮೊದಲ ಹಾಗೂ ಅವರ ಐಪಿಎಲ್ ವೃತ್ತಿಜೀವನದ ಮೊದಲ ಶತಕವನ್ನು ಪೂರ್ಣಗೊಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದ ಕಿಶನ್ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 106 ರನ್ ಕಲೆಹಾಕಿದರು.