ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಕಾಡ್ಗಿಚ್ಚು ಹರಡುತ್ತಿದೆ. ಗಾಳಿಯ ವೇಗದಿಂದಾಗಿ ಬೆಂಕಿ ವ್ಯಾಪಿಸುತ್ತಿದ್ದು, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಶುಕ್ರವಾರ ರಾತ್ರಿ ಆರಂಭವಾದ ಈ ಬೆಂಕಿಯಿಂದ 500ಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ. ಬಿದಿರುತಳ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಪ್ರಾರಂಭವಾದ ಬೆಂಕಿ ಈಗ ದೇವಾಲಯದ ಸಮೀಪಕ್ಕೆ ಹರಡಿದೆ.