ಸ್ಪಂದನಾ ಅವರ ನಿಧನದಿಂದ ವಿಜಯ್ ರಾಘವೇಂದ್ರ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಇಂದು (ಆಗಸ್ಟ್ 16) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್ ಮೈದಾನದಲ್ಲಿ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು 4 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.