ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಪ್ರತಿಯೊಂದು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಆನೇಕಲ್ನಲ್ಲಿ ಅಭ್ಯರ್ಥಿ ಒಬ್ಬರು ವಿಭಿನ್ನವಾಗಿ ನಾಮಪತ್ರ ಸಲ್ಲಿಸಿ ಎಲ್ಲರ ಗಮನಸೆಳೆದಿದ್ದಾರೆ. ಆನೇಕಲ್ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ಅವರು ಪಕ್ಷದ ಚುನಾವಣಾ ಚಿಹ್ನೆಯಾದ ಅಣಕು ಆನೆ ಮೇಲೆ ಸವಾರಿ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ.