ಬೆಂಗಳೂರು: ಗ್ರಾಹಕರ ಜೊತೆ ಕಾಫಿ ಸವಿದು, ಬಿಎಂಟಿಸಿ ಬಸ್​​ನಲ್ಲಿ ತೆರಳಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಿಗ್ಗೆ ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.