ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ

ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 2024 ಡಿಸೆಂಬರ್ 14 ರಿಂದ 2025 ಮಾರ್ಚ್ 12 ರವರೆಗೆ 3.68 ಕೋಟಿ ರೂಪಾಯಿಗಳ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ 3.40 ಕೋಟಿ ನಗದು, 20.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 6.39 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ ಸೇರಿವೆ. ಗುರುವಾರ ನಡೆದ ಹುಂಡಿ ಎಣಿಕೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಪೊಲೀಸರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.