ದಾವಣಗೆರೆ, ಆಗಸ್ಟ್ 6: ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆದ ಗೃಹ ಜ್ಯೋತಿ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್, ಪ್ರಧಾನಿ ನರೇಂದ್ರ ಮೋದಿ ಕೇಳಿ ಅನ್ನಭಾಗ್ಯ ಘೋಷಣೆ ಮಾಡಿದ್ದಿರಾ ಎಂದು ಪ್ರಶ್ನಿಸಿದರು. ಈ ವೇಳೆ ಶಾಸಕರನ್ನು ಸಭಿಕರು ಆಕ್ಷೇಪ ವ್ಯಕ್ತಪಡಿಸಿದ ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿದಾಗ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಯಿತು. ಕೂಡಲೇ ಮಧ್ಯಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಜನರ ಆಕ್ರೋಶದ ನಡುವೆಯೂ ಶಾಸಕರು ಭಾಷಣ ಮುಂದುವರಿಸಿದರು. ಶಾಸಕರು, ನಾನು ಎಂಟು ಸಲ ವಿಧಾನಸಭೆಗೆ ಸ್ಪರ್ಧಿಸಿದ್ದೇನೆ.