ಚುನಾವಣಾ ಆಯೋಗದ ಅಧಿಕಾರಿಗಳ ಜೊತೆ ಉದ್ಧವ್ ಠಾಕ್ರೆ ವಾಗ್ವಾದ

ತಮ್ಮ ಬ್ಯಾಗ್‌ಗಳನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲಿಸುವ ವಿಡಿಯೋವನ್ನು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹಂಚಿಕೊಂಡಿದ್ದಾರೆ. ಅವರು ತಮ್ಮ ಬ್ಯಾಗ್‌ಗಳನ್ನು ಪರಿಶೀಲಿಸಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಅವಕಾಶ ನೀಡುವ ಮೂಲಕ ಸಹಕರಿಸಿದ್ದಾರೆ. ಬಳಿಕ, ಇದೇ ರೀತಿ ಎಲ್ಲ ರಾಜಕೀಯ ನಾಯಕರ ಬ್ಯಾಗ್​ಗಳನ್ನೂ ಪರಿಶೀಲನೆ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.