ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ರಮೇಶ್ ಜಾರಕಿಹೊಳಿ ಅವರು ಬಸನಗೌಡ ಪಾಟೀಲ್ ಯತ್ನಾಳ್ ಬಣದವರು, ಮತ್ತು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಬೇಕೆಂದು ಆಗ್ರಹಿಸಿದವರು. ಯತ್ನಾಳ್ ಉಚ್ಚಾಟನೆ ಬಳಿಕ ಅವರ ಮೌನವಾಗಿರೋದು ನಿಜವಾದರೂ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದ ಬಿಜೆಪಿ ನಾಯಕರೆಲ್ಲ ನಿನ್ನೆಯಿಂದ ಬೆಳಗಾವಿಯಲ್ಲಿದ್ದಾರೆ, ಅದರೆ ಜಾರಕಿಹೊಳಿ ಮಾತ್ರ ಕಾಣಿಸಿಕೊಂಡಿಲ್ಲ.