ಬೆಳಗಾವಿ, ಅಕ್ಟೋಬರ್ 4: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ (Siddaramaiah Government) ವಿರುದ್ಧ ನಿನ್ನೆ ತೀವ್ರ ಅಸಮಾಧಾನ ಹೊರಹಾಕಿದ್ದ ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು (Kagawad Congress MLA Raju Kage) ಇಂದು ಸಚಿವರ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯ ಶಾಸಕರಿಗೆ ಗೌರವ ಕೊಡಲ್ಲ, ಸ್ಪಂದಿಸುವ ಕೆಲಸ ಮಾಡಲ್ಲ. ರಾಜಕೀಯದಿಂದ ನಿವೃತ್ತಿ ಪಡೆಯುವುದು (Political retirement) ಒಳ್ಳೆಯದು ಅನ್ನೋ ಹಂತಕ್ಕೆ ಬಂದಿದ್ದೇನೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.