ದೆಹಲಿಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

27 ವರ್ಷಗಳ ಕಾಲದ ನಂತರ ಕೇಸರಿ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ನಿರ್ಣಾಯಕ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗುತ್ತಿದ್ದಂತೆ ದೆಹಲಿಯ ಪ್ರಧಾನ ಕಚೇರಿಯ ಹೊರಗೆ ಬಿಜೆಪಿ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ದೆಹಲಿಯ 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಎಪಿ 22 ಸ್ಥಾನಗಳಲ್ಲಿ ಮುಂದಿದೆ.