ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಅನಿಕೇತ್ ವರ್ಮಾ ಅವರನ್ನು ಕುಲ್ದೀಪ್ ಯಾದವ್ ಔಟ್ ಮಾಡುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಎಂಟನೇ ವಿಕೆಟ್ ನೀಡಿದರು. 40 ಎಸೆತಗಳಲ್ಲಿ 74 ರನ್ ಬಾರಿಸಿ ಆಡುತ್ತಿದ್ದ ಅನಿಕೇತ್, ಕುಲ್ದೀಪ್ ಎಸೆತವನ್ನು ಸಿಕ್ಸರ್ಗಟ್ಟುವ ಯತ್ನದಲ್ಲಿ ಮಿಡ್ ವಿಕೆಟ್ ಕಡೆ ಆಡಿದರು. ಆದರೆ ಅಲ್ಲೆ ಇದ್ದ ಜ್ಯಾಕ್ ಫ್ರೇಸರ್ ಮೆಕ್‌ಗರ್ಕ್ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಪಡೆದರು.