ಕಲಬುರಗಿಯಲ್ಲಿ ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ
ಕಲಬುರಗಿಯ ಶೇಖ್ ರೋಜಾ ದರ್ಗಾದಲ್ಲಿ ನಡೆದ ಸಾಮೂಹಿಕ ವಿವಾಹದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮುಸ್ಲಿಂ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಹಾರಿಸಲಾಗಿದ್ದು, ಇದರಿಂದ ರಾಷ್ಟ್ರೀಯ ಭಾವನೆಗೆ ಧಕ್ಕೆಯಾಗಿದೆ. ಈ ಘಟನೆಯ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.