ಸಿದ್ದರಾಮಯ್ಯಗೆ ವಿಪರೀತವಾಗಿ ಕಾಡುತ್ತಿದೆ ಮಂಡಿನೋವು: ಈ ವಿಡಿಯೋ ನೋಡಿದ್ರೆ ನಿಮಗೆ ಗೊತ್ತಾಗುತ್ತೆ

ಕಳೆದ 27 ದಿನಗಳಿಂದ ತೀವ್ರ ಮಂಡಿನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿನ ಅಂತರರಾಷ್ಟ್ರೀಯ ಕಾರ್ಯಕ್ರಮಕ್ಕೆ ವೀಲ್‌ಚೇರ್‌ನಲ್ಲಿ ಆಗಮಿಸಿದ್ದರು. ನಾಡಗೀತೆಯ ಸಮಯದಲ್ಲಿಯೂ ಅವರು ಎದ್ದು ನಿಲ್ಲಲು ಸಾಧ್ಯವಾಗಲಿಲ್ಲ. ಆರೋಗ್ಯ ಸಮಸ್ಯೆಯಿಂದಾಗಿ ಅವರು ಹಲವು ಕಾರ್ಯಕ್ರಮಗಳಿಗೆ ಹಾಜರಾಗದಿರಲು ನಿರ್ಧರಿಸಿದ್ದರು ಆದರೆ ಅಂತರರಾಷ್ಟ್ರೀಯ ಕಾರ್ಯಕ್ರಮದ ಮಹತ್ವದಿಂದಾಗಿ ಭಾಗವಹಿಸಿದ್ದರು.