ಬೆಂಗಳೂರಿನಲ್ಲಿ ನಡೆದ ಜಾತಿ ಗಣತಿ ಸಮಯದಲ್ಲಿ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ ಮೆರೆದಿದ್ದಾರೆ. ಮನೆ ಮಾಲೀಕರ ಮಾಹಿತಿ ಪಡೆಯದೇ ಸ್ಟಿಕ್ಕರ್ ಅಂಟಿಸಿದ್ದಕ್ಕೆ ಆಕ್ಷೇಪಿಸಿದ ಮನೆ ಮಾಲೀಕರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಪೊಲೀಸರು ದೂರು ದಾಖಲಿಸುವ ಬದಲು ರಾಜಿ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.