ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನವಯುಗ್ ಸುರಂಗ ಮಾರ್ಗದಲ್ಲಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅತಿ ವೇಗವಾಗಿ ಬಂದ ಪ್ರಯಾಣಿಕ ಬಸ್ ಅಪಘಾತಕ್ಕೀಡಾಗಿದೆ. ಸಾವುನೋವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, 13 ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯ ವೀಡಿಯೊದಲ್ಲಿ ಬಸ್ ಸುರಂಗದ ಬದಿಗೆ ಡಿಕ್ಕಿ ಹೊಡೆದಿದ್ದು, ನಂತರ ಮತ್ತೊಂದು ಬಸ್ ಅದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದು ಮಗುಚಿ ಬಿದ್ದಿದೆ. ಅಪಘಾತದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.