ಐಎಂಎಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜಮೀರ್ ಮನೆ ಮೇಲೆ ದಾಳಿ ನಡೆಸಿ ಅಕ್ರಮ ಆಸ್ತಿಯ ಬಗ್ಗೆ ಮಾಹಿತಿ ನೀಡಿತ್ತು. ಅದೇ ಮಾಹಿತಿ ಆಧಾರದ ಮೇಲೆ ಆಗಿನ ಎಸಿಬಿ 2022 ರಲ್ಲಿ ಪ್ರತ್ಯೇಕ ಪ್ರಕರಣವೊಂದನ್ನು ದಾಖಲಿಸಿಕೊಂಡು ಸಚಿವನ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿತ್ತು.