ವಿವಿಧ ಅಭಿವೃದ್ದಿ ಯೋಜನೆಗಳೊಂದಿಗೆ ವಿಶ್ವನಾಯಕರ ಗಮನಸೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರು ಇದೀಗ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಮೆರಿಕ ಮೂಲದ ಸಲಹಾ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 78 ರ ರೇಟಿಂಗ್‌ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಗುರುತಿಸಲ್ಪಟ್ಟಿದ್ದಾರೆ.