ಕಾಂಗ್ರೆಸ್ ಶಾಸಕ ಹೆಚ್​ಡಿ ತಮ್ಮಯ್ಯ ಹೇಳಿದ್ದೇನು ನೋಡಿ!

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂಪಾಯಿ ಅಲ್ಲ, 100 ಕೋಟಿ ರೂಪಾಯಿ ಆಫರ್ ಬಂದಿದೆ ಎಂಬ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆದರೆ, ಈ ಹೇಳಿಕೆ ಸುಳ್ಳು ಎಂದು ಕಿತ್ತೂರಿನ ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ, ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್​ಡಿ ತಮ್ಮಯ್ಯ ಕೂಡ, ತಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದಿದ್ದಾರೆ.