ಕರ್ನಾಟಕ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಚಾಮರಾಜನಗರ: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್​ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಚಾಮರಾಜನಗರದ ಅಂಗನವಾಡಿ ಕಾರ್ಯಕರ್ತೆಯರು ಇಂದು ಚಾಮರಾಜನಗರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ನಡೆಸಿದರು. ಗೃಹ ಲಕ್ಷ್ಮೀ ಯೋಜನೆ ಬೇಡ ಗೌವರದನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ ನೀಡಿರುವ ಮೊಬೈಲ್ ವಾಪಸ್ಸು ನೀಡಲು ಮುಂದಾಗಿದ್ದಾರೆ.