ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್​ ಹೆಸರು: ಉಗ್ರ ಹೋರಾಟ ಎಚ್ಚರಿಕೆ

ಗದಗ ಜಿಲ್ಲೆಯ ನರೇಗಲ್‌ನ ಅನ್ನದಾನೇಶ್ವರ ಮಠದ 500 ವರ್ಷಗಳಷ್ಟು ಹಳೆಯ ಭೂಮಿಯನ್ನು ವಕ್ಫ್ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. ಮಠದ ಆಡಳಿತ ಮತ್ತು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, 2019-20ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಭೂಮಿಯನ್ನು ಮಠಕ್ಕೆ ಹಿಂದಿರುಗಿಸಬೇಕೆಂದು ಒತ್ತಾಯಿಸಲಾಗಿದೆ.