ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇದೆ. ಚಿಕ್ಕಬಳ್ಳಾಪುರದಲ್ಲಿ ರಸ್ತೆ ಕಾಣದಷ್ಟು ಮಂಜು ಆವರಿಸಿತ್ತು. ಫಾಗ್​ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ಪಡುವಂತಾಯಿತು. ವಿಡಿಯೋ ಇಲ್ಲಿದೆ ನೋಡಿ.