ಬೆಂಗಳೂರಿನಲ್ಲಿ ಟಿವಿ9 ಜೊತೆಗೆ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಪ್ರಜ್ವಲ್ರನ್ನ ದೇವೇಗೌಡರೇ ವಿದೇಶಕ್ಕೆ ಕಳಿಸಿಕೊಟ್ಟರು, ಪ್ರಧಾನಿ ಮೋದಿ ಪಾಸ್‌ಪೋರ್ಟ್ ಸಿದ್ಧಮಾಡಿ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಈ ಸಮಯದಲ್ಲಿ ರಾಜಕೀಯಕ್ಕಾಗಿ ಸುಳ್ಳು ಹೇಳುವುದು ಶೋಭೆಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದಕ್ಕೆ ಸಿಎಂ ಈ ರೀತಿ ಆರೋಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.