ತಮ್ಮ ಚೇಂಬರ್​ನಲ್ಲಿ ತೆಲಂಗಾಣ ನೂತನ ಸಿಎಂ ಎ ರೇವಂತ್ ರೆಡ್ಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮತದಾರರಿಗೆ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಅದು 6 ಗ್ಯಾರಂಟಿಗಳನ್ನು ನೀಡಿದೆ. ರೇವಂತ್ ರೆಡ್ಡಿ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಆದೇಶವೊಂದಕ್ಕೆ ಸಹಿ ಹಾಕಿದರು. ಆದರೆ ಅವುಗಳನ್ನು ಜಾರಿಗೊಳಿಸುವುದು ಅಷ್ಟು ಸುಲಭವಲ್ಲ ಎಂದು ಪ್ರಮಾಣನಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರಬಹುದು.