ಗಾಂಧಿ ಪ್ರತಿಮೆ ಅನಾವರಣ

1924ರ ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನದ ಶತಮಾನೋತ್ಸವ ಭರ್ಜರಿಯಾಗಿ ಆರಂಭವಾಗಿದ್ದು, ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ನಂತರ ಖಾದಿ‌ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೂ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್​ನ ಗಣ್ಯಾತಿ ಗಣ್ಯ ನಾಯಕರು ಹಾಜರಿದ್ದರು.