ಡಿಎಂಕೆ ಸರ್ಕಾರವನ್ನ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸಲ್ಲ: ಅಣ್ಣಾಮಲೈ

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿಂದಹ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಭಾರೀ ಆಕ್ರೋಶ, ಪ್ರತಿಭಟನೆಗಳು ಕೂಡಾ ನಡೆದಿದೆ. ಅಲ್ಲದೆ ಈ ಪ್ರಕರಣ ಇದೀಗ ರಾಜಕೀಯ ತಿರುವನ್ನು ಪಡೆದುಕೊಂಡಿದ್ದು, ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ದಿನಕ್ಕೆ ಆರು ಬಾರಿ ಛಾಟಿ ಏಟು, 48 ದಿನಗಳ ಉಪವಾಸ ಮತ್ತು .ಎಂ.ಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂಬ ಪ್ರತಿಜ್ಞೆಯನ್ನು ಮಾಡಿದ್ದಾರೆ.