7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ರಮಣದೀಪ್ ಸಿಂಗ್, ತಾವು ಎದುರಿಸಿದ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದ ಆರಂಭವನ್ನು ಸ್ಮರಣೀಯವಾಗಿಸಿಕೊಂಡರು. ಇದಲ್ಲದೆ ತಮ್ಮ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.