ಮೃತ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು
ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಗ್ರಾಮಸ್ಥರೆಲ್ಲ ಸೇರಿ ದೇವರ ಹಸುವನ್ನು ಟ್ರ್ಯಾಕ್ಟರ್ ನಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಗ್ರಾಮದ ಹಳೆಯ ರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಇಂಡಿ ತಾಲೂಕಿನ ಹೊರ್ತಿ ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.