ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್

ನಟ ಕಿಚ್ಚ ಸುದೀಪ್ ಅವರು ಇಂದು ತಮ್ಮ ಸಿಸಿಎಲ್ ಕ್ರಿಕೆಟ್ ತಂಡದ ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು (ಫೆಬ್ರವರಿ 28) ಮೈಸೂರಿನಲ್ಲಿ ಸಿಸಿಎಲ್ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇದೇ ಕಾರಣಕ್ಕೆ ಇಂದು ಸುದೀಪ್ ಹಾಗೂ ಕ್ರಿಕೆಟ್ ತಂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದೆ.