ಮಳೆಗಾಲದಲ್ಲಿ ರಸ್ತೆ ಗುಂಡಿ ಸಹಜವೆಂದ ಸಚಿವ ಪರಮೇಶ್ವರ

ಬೆಂಗಳೂರನ್ನು ಬ್ರ್ಯಾಂಡ್​ ಬೆಂಗಳೂರು ಮಾಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಯೋಜನೆ ಹಮ್ಮಿಕೊಂಡಿದ್ದಾರೆ. ಹಾಗೆಂದು ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಉಂಟಾಗುವುದು ಸಹಜ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರ್ಯಾಂಡ್​ ಬೆಂಗಳೂರು ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು.