ಬೆಂಗಳೂರಿನಲ್ಲಿ ಬಿಎಂಟಿಸಿ ಸಿಬ್ಬಂದಿ ಜೊತೆ ಮುಂದುವರೆದ ಕಿರಿಕ್: ಪಾಸ್ ತೋರಿಸಿ ಎಂದಿದ್ದಕ್ಕೆ ಆವಾಜ್ ಹಾಕಿದ ಪ್ರಯಾಣಿಕ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪಾಸ್​ ತೋರಿಸಲು ನಿರಾಕರಿಸಿದ ಪ್ರಯಾಣಿಕನೊಬ್ಬ, ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಪಾಸ್​ ತೋರಿಸುವಂತೆ ಕೇಳಿದರೂ ಪ್ರಯಾಣಿಕ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.