ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣ್ಣಕಲ್ಲಬಿದರಿ ಗ್ರಾಮದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯವು ದನದ ಕೊಟ್ಟಿಗೆಯಲ್ಲಿದೆ. ವಸತಿ ನಿಲಯವಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಮೂಲಭೂತ ಸೌಕರ್ಯಗಳ ಕೊರತೆ, ಕೊಳಕು ಕೊಠಡಿಗಳು, ಸಾಕಷ್ಟು ಶೌಚಾಲಯಗಳ ಕೊರತೆ ಇದೆ. ಹಲವು ವಿದ್ಯಾರ್ಥಿಗಳು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ನಿಲಯದ ಆಡಳಿತದ ನಿರ್ಲಕ್ಷ್ಯ ಇದಕ್ಕೆ ಕಾರಣ ಎನ್ನಲಾಗುತ್ತಿದೆ.