ಕೊಪ್ಪಳ: ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ ಸಂಪೂರ್ಣ ಬೆಂಕಿಗಾಹುತಿ

ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿರುವ ಕೆ.ಜೆ.ಪಿ ಜ್ಯುವೆಲ್ಲರಿ ಶಾಪ್​ನಲ್ಲಿ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಜ್ಯುವೆಲ್ಲರಿ ಶಾಪ್​ಗೆ ಬೆಂಕಿ ತಗುಲಿ ಅಪಾರ ಮೌಲ್ಯದ ಚಿನ್ನಾಭರಣ, ವಸ್ತು ನಾಶವಾಗಿದೆ. ಅಗ್ನಿಶಾಮಕದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಗಂಗಾವತಿ ನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ.