ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿವೆ. ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಎರಡು ದೊಡ್ಡ ಆನೆಗಳೊಂದಿಗೆ ಒಂದು ಮರಿಯಾನೆ ಕಂಡುಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯಾಧಿಕಾರಿಗಳು ಎಚ್ಚರದಿಂದ ಇರುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.