ಜನಾಕ್ರೋಶ ಯಾತ್ರೆ ಆರಂಭಿಸಿದ ಬಿಜೆಪಿ ನಾಯಕರು

ರಾಜ್ಯ ಬಿಜೆಪಿಯ ಮತ್ತೊಂದು ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಆದರೆ ಬಸನಗೌಡ ಯತ್ನಾಳ್ ಬಣದ ಭಾಗವಾಗಿದ್ದ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಇತರ ನಾಯಕರು ಕಾಣಿಸಲಿಲ್ಲ. ಬಿಜೆಪಿ ಆರಂಭಿಸಿರುವ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ನಾಲ್ಕು ಹಂತಗಳಲ್ಲಿ ನಡೆಯಲಿದೆ.