ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ಕೋಳಿ ಫಾರ್ಮ್‌ನಲ್ಲಿನ 3000 ಕೋಳಿಗಳು ಇದ್ದಕ್ಕಿದ್ದಂತೆ ಸತ್ತಿವೆ. ತಜ್ಞ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಕ್ಕಿ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ವಿಷಪೂರಿತ ಆಹಾರ ಸೇವನೆಯಿಂದ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಮೂರು ತಿಂಗಳ ಹಿಂದೆ ಈ ಫಾರ್ಮ್ ಆರಂಭಿಸಿದ್ದ ಯುವಕ ಈ ಘಟನೆಯಿಂದ ಆಘಾತಕ್ಕೀಡಾಗಿದ್ದಾನೆ.