ಪ್ರವಾಸಿ ತಾಣ ಕೆಮ್ಮಣ್ಣು ಗುಂಡಿ ಗುಡ್ಡದಲ್ಲಿ ಕಾಡ್ಗಿಚ್ಚು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪಶ್ಚಿಮಘಟ್ಟ ಭಾಗ ಹಾಗೂ ಶೋಲಾ ಅರಣ್ಯದಲ್ಲಿ ಕಾಡ್ಗಿಚ್ಚು ಬೀಳಲು ಆರಂಭವಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣು ಗುಂಡಿಯ ಗುಡ್ಡದಲ್ಲಿ ನಿನ್ನೆ (ಸೋಮವಾರ ಫೆ.19)ರ ರಾತ್ರಿ ಬೆಂಕಿ ಹೊತ್ತಿ ಉರಿದಿದೆ.