1 ಲಕ್ಷಕ್ಕೂ ಹೆಚ್ಚು ಕ್ರಿಕೆಟ್ ಅಭಿಮಾನಿಗಳಿಂದ ರಾಷ್ಟ್ರಗೀತೆ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೂ ಮುನ್ನ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಪ್ರೇಕ್ಷಕರು ಎದ್ದು ನಿಂತು ಗೌರವ ಸೂಚಿಸಿದ್ದು, 1 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಒಟ್ಟಾಗಿ ರಾಷ್ಟ್ರಗೀತೆ ಹಾಡಿದ್ದಾರೆ. ಆ ಮೂಲಕ ನರೇಂದ್ರ ಮೋದಿ ಸ್ಟೇಡಿಯಂ ಅದ್ಭುತ ದೃಶ್ಯಕ್ಕೆ ಸಾಕ್ಷಿಯಾಗಿದೆ.