Bengaluru Rain: ಸಂಜೆಯಾಗುತ್ತಲೇ ಬೆಂಗಳೂರಿನಲ್ಲಿ ಮಳೆ ಆರಂಭ, ರಸ್ತೆಗಳು ಜಲಾವೃತ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಐದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅದರಂತೆ ಇಂದು ಸಂಜೆಯಾಗುತ್ತಲೇ ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರು ನಗರದಲ್ಲಿ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡವು. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿ ಟ್ರಾಫಿಕ್ ಜಾಮ್ ಉಂಟಾದವು.