ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ನಾಳೆ ಹೈದರಾಬಾದ್ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು ಆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ಶನಿವಾರದಿಂದ ತೆಲಂಗಾಣದಲ್ಲೇ ಇದ್ದಾರೆ.