ಬಿಜೆಪಿ-ಪಿಎಂಕೆ ಅಭ್ಯರ್ಥಿಗೆ ಜಯ ಖಂಡಿತ ಎಂದ ಗಿಳಿ ಜ್ಯೋತಿಷಿ ಜೈಲಿಗೆ, ಪೊಲೀಸರು ಹೇಳಿದ್ದೇನು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷದ (ಪಿಎಂಕೆ) ಕಡಲೂರು ಕ್ಷೇತ್ರದ ಅಭ್ಯರ್ಥಿ ಥಂಗರ್ ಬಾಚನ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಗಿಳಿಶಾಸ್ತ್ರ ನುಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ವಿಡಿಯೋದಲ್ಲಿ ಜ್ಯೋತಿಷಿಯನ್ನು ಪೊಲೀಸರು ಎಳೆದುಕೊಂಡು ಹೋಗಿ ಬಲವಂತವಾಗಿ ತಮ್ಮ ವಾಹನದಲ್ಲಿ ಕೂರಿಸುವುದನ್ನು ನೋಡಬಹುದು. ಇದನ್ನು ನೋಡಿ ಜನರು ಪೊಲೀಸರ ಈ ಕ್ರಮವನ್ನು ಖಂಡಿಸಿದ್ದಾರೆ.