ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಸ್ಥಳಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಮುಂದಿನ ಮೂರು ದಿನಗಳ ಕಾಲ ತೀವ್ರ ಬಿಸಿಲಿಗೆ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಹೋಗದಿರಲು, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿ ಮತ್ತು ಟೋಪಿ ಧರಿಸಲು ಮನವಿ ಮಾಡಿದ್ದಾರೆ. ಯಾವುದೇ ತೊಂದರೆ ಎದುರಾದರೆ 1077 ಗೆ ಕರೆ ಮಾಡಲು ಸೂಚಿಸಲಾಗಿದೆ.