69ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇಂದು (ಅಕ್ಟೋಬರ್ 17) ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾರತಿ ವಿಷ್ಣುವರ್ಧನ್ ಅವರ ಸಾಧನೆ ಹಾಗೂ ಜೀವನದ ಬಗ್ಗೆ ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರ ನಿರ್ಮಾಣ ಆಗಿದ್ದು ಇದಕ್ಕೆ ಅನಿರುದ್ಧ್ ಜತ್ಕರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರಕ್ಕೆ ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ ನ್ಯಾಷನಲ್ ಅವಾರ್ಡ್ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಿರುದ್ಧ್ ಜತ್ಕರ್ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಅನಿರುದ್ಧ್ ಜತ್ಕರ್ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.