ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಮಂಡ್ಯದ ವ್ಯಕ್ತಿ

ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಈಗ ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ. ವ್ಯಕ್ತಿಯೊಬ್ಬರು ಚೆಸ್ಕಾಂ ಸಿಬ್ಬಂದಿ ಬಳಿ ಶುಲ್ಕ ಪಾವತಿ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಜಾರಿಗೊಳಿಸದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿರುವ ಘಟನೆ ಮಂಡ್ಯದ ಎಲೆಚಾಕನಹಳ್ಳಿಯಲ್ಲಿ ನಡೆದಿದೆ.