ಬೀದರ್: ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲು ಮುಂದಾಗಿರುವ ಬಗ್ಗೆ ಮಾಹಿತಿ ತಿಳಿದು ಅಖಾಡಕ್ಕಿಳಿದ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ದಾಳಿ ನಡೆಸಿ ಗೋವನ್ನು ರಕ್ಷಿಸಿದ್ದಾರೆ. ಇನಾಮುಲ್ಲಾಖಾನ್ ಅವರ ಮನೆಯಲ್ಲಿ ಕಾನೂನು ಬಾಹಿರವಾಗಿ ಗೋಹತ್ಯೆ ನಡೆಸಲು ತಯಾರಿ ನಡೆಸಲಾಗುತ್ತಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಶಾಸಕರು ಗೋಹತ್ಯೆ ತಡೆದು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶಾಸಕರು ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಕಿಸಿಕೊಂಡಿದ್ದಾರೆ.