ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಅವರು ಕನ್ನಡದಲ್ಲೇ ಭಾಷಣ ಮಾಡಿದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಕರ್ನಾಟಕ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.