ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಬಿಸಿಸಿಐ, ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಮತ್ತು ಮಿಥಾಲಿ ರಾಜ್ ಅವರಿಗೆ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಗಳಿಗಾಗಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿತು. ಮೂವರಿಗೂ ವಿಶೇಷ ಟ್ರೋಫಿ ನೀಡಲಾಯಿತು. ಅದರಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸಿದ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.